ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 48 ಗಂಟೆಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ವರುಣನ ಆರ್ಭಟ ನಡೆದಿದೆ.
ಹೇಮಾವತಿ ನದಿ ಸಂಪೂರ್ಣ ಭರ್ತಿಯಾಗಿದ್ದು, ಶನಿವಾರ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಮುಂಜಾಗ್ರತ ಕ್ರಮವಾಗಿ ಮೂಡಿಗೆರೆ ತಹಶೀಲ್ಡಾರ್ ರಜೆಯನ್ನು ಘೋಷಣೆ ಮಾಡಿದ್ದಾರೆ.