ETV Bharat / state

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಬೈಕ್ ಸವಾರ ಸಾವು - ಮರ ಬಿದ್ದು ಬೈಕ್ ಸವಾರ ಸಾವು

ಬೈಕ್‍ ಮೇಲೆ ಮರ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಚಾರ್ಮಾಡಿ ಘಾಟಿಯಲ್ಲಿ ಜರುಗಿದೆ.

tree-fell-down-bike-rider-dies-in-charmedi-ghati
ಬೈಕ್ ಸವಾರ ಸಾವು
author img

By

Published : Nov 7, 2021, 3:54 PM IST

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬೈಕ್​ ಸವಾರನ ಮೇಲೆ ಮರ ಬಿದ್ದ ಕಾರಣ ಆತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತನನ್ನು ಜೀವನ್ (21) ಎಂದು ಗುರುತಿಸಲಾಗಿದೆ.

ಜೀವನ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದವರು. ಇವರು ತಮ್ಮ ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಭಾಗದಲ್ಲಿ ಯಥೇಚ್ಛವಾಗಿ ಮಳೆ ಸುರಿಯುತ್ತಿದೆ. ಮಳೆಯಲ್ಲೇ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಸಂಚರಿಸುತ್ತಿದ್ದಾಗ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಬೈಕ್ ಮೇಲೆ ಮರ ಬಿದ್ದಿದೆ.

ಕೂಡಲೇ ಸ್ನೇಹಿತರು ಜೀವನ್​ನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಇದೇ ವೇಳೆ, ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಖಾಲಿ ಆ್ಯಂಬುಲೆನ್ಸ್​ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದ ಹದಿನೈದು ದಿನದಿಂದ ಸಂಜೆ ವೇಳೆ ಭಾರೀ ಮಳೆ ಸುರಿಯುತ್ತಿದೆ. ರಾತ್ರಿಯಿಡೀ ಧಾರಾಕಾರವಾಗಿ ಸುರಿಯುವ ಮಳೆ ಹಗಲಲ್ಲಿ ಬಿಡುವು ನೀಡುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.