ಚಿಕ್ಕಮಗಳೂರು : ಐದು ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ಜರುಗಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಕೋಳೂರಿನ 36 ವರ್ಷದ ನಾರಾಯಣ ಎಂಬ ಆರೋಪಿಯು 5 ವರ್ಷದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತಾಗಿ ಬಾಲಕಿಯ ತಾಯಿ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಕ್ಷಣವೇ ಕಾರ್ಯಕ್ರವೃತ್ತರಾದ ಪೊಲೀಸರು ಆರೋಪಿಯನ್ನು ಪೊಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ರೀತಿಯಾದ ದುರ್ಘಟನೆಗಳು ನಡೆಯುತ್ತಲೇ ಇವೆ.
ಕಾನೂನಿನ ಭಯವಿಲ್ಲದೆ ನಿರಾತಂಕವಾಗಿ ಅತ್ಯಾಚಾರಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದ್ದಾರೆ. ಅತ್ಯಾಚಾರ ಎಸಗುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ ಕಾನೂನಿನ ಅಡಿಯಲ್ಲಿ ಬರುವ ಎಲ್ಲಾ ಕ್ರಮಗಳನ್ನು ಶೀಘ್ರವಾಗಿ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.