ಚಿಕ್ಕಮಗಳೂರು: ಕಾಡು ಕುರಿ ಬೇಟೆಯಾಡಿದ ಆರೋಪದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಕೊಪ್ಪದ ಸಂಜಯ್ ಹಾಗೂ ಪ್ರವೀಣ್ ಎಂಬುವರನ್ನು ಕಾಡು ಕುರಿ ಬೇಟೆಯಾಡಿದ ಆರೋಪ ಕೇಳಿ ಬಂದ ಹಿನ್ನೆಲೆ ಮತ್ತೋಡಿ ವಲಯ ಅರಣ್ಯ ಅಧಿಕಾರಿಗಳು ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
1972 ರ ವನ್ಯಜೀವಿ ಸಂರಕ್ಷಣಾ ಕಾಯ್ಡೆಯಡಿ ಇವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.