ಚಿಕ್ಕಮಗಳೂರು : ಅಕ್ರಮವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಚಿಕ್ಕ ಕುರುಬರಹಳ್ಳಿ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ, ಇಬ್ಬರು ಆರೋಪಿಗಳಾದ ಅಬುಬಕರ್ ಹಾಗೂ ಆಸಿಫ್ ನನ್ನು ಬಂಧಿಸಿದ್ದಾರೆ.
ಇನ್ನು ಆರೋಪಿಗಳಿಂದ ಸುಮಾರು 45.000 ರೂ. ಮೌಲ್ಯದ ಒಣಗಿದ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.