ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ಇಬ್ಬರಲ್ಲಿ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದ 70 ವರ್ಷದ ವೃದ್ಧ ಹಾಗೂ ತಾಲೂಕಿನ 37 ವರ್ಷದ ಪುರುಷನಿಗೆ ಸೋಂಕು ತಗುಲಿದ್ದು. ಇವರನ್ನು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಂಕು ಪತ್ತೆ ಆಗಿರುವ ವ್ಯಕ್ತಿಗಳ ಮನೆಯ ಸುತ್ತ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕ ಹೊಂದಿದವರ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಕಲೆಹಾಕುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೂ 50 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇಲ್ಲಿ ತನಕ 27 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಓರ್ವ ಸಾವನ್ನಪ್ಪಿದ್ದು, 22 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.