ETV Bharat / state

ಚಿಕ್ಕಮಗಳೂರು: ಮನೆ ಮೇಲೆ ಬೃಹತ್ ಮರ ಬಿದ್ದುಇಬ್ಬರು ಮಹಿಳೆಯರ ಸಾವು - ಈಟಿವಿ ಭಾರತ ಕನ್ನಡ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

two-women-died-after-a-huge-tree-fell-on-their-house
ಚಿಕ್ಕಮಗಳೂರು : ಮನೆ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಮಹಿಳೆಯರು ಸಾವು
author img

By

Published : Aug 10, 2022, 2:06 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯು ಸರಣಿ ಅನಾಹುತಗಳಿಗೆ ಕಾರಣವಾಗಿದೆ. ಭಾರಿ ಮಳೆಯಿಂದಾಗಿ ಇಲ್ಲಿನ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಚಂದ್ರಮ್ಮ ಹಾಗೂ ಸರಿತಾ ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು : ಮನೆ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಮಹಿಳೆಯರು ಸಾವು

ಮನೆ ಶಿಥಿಲಗೊಂಡಿರುವ ಕಾರಣದಿಂದ ಸರಿತಾ ಎಂಬುವವರು ತನ್ನ ಇಬ್ಬರು ಮಕ್ಕಳೊಂದಿಗೆ ಚಂದ್ರಮ್ಮ ಎಂಬವರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆದರೆ ನಿನ್ನೆ ಸುರಿದ ಭಾರೀ ಮಳೆಗೆ ಚಂದ್ರಮ್ಮ ಅವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು,ಇದರಿಂದ ತೀವ್ರವಾಗಿ ಗಾಯಗೊಂಡ ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಂದ್ರಮ್ಮ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳಾದ ಸುನಿಲ್ ಮತ್ತು ದೀಕ್ಷಿತ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ : ಡ್ರಗ್ಸ್​ ನಶೆಯಲ್ಲಿ ತಲೆಯ ಮೇಲೆ ಮೂತ್ರ ವಿಸರ್ಜಿಸಿದ ಪತಿ.. ಠಾಣೆ ಮೆಟ್ಟಿಲೇರಿದ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.