ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ಅರಣ್ಯ ಇಲಾಖೆ ಕ್ವಾಟ್ರಸ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿದೆ.
ಮಹಿಳೆಯ ಜೊತೆ ಕೊಪ್ಪ ವಿಭಾಗದ ಉಪವಲಯ ಅರಣ್ಯಾಧಿಕಾರಿ ಚಂದನ್ ಇಲಾಖೆಯ ಕ್ವಾಟ್ರಸ್ ನಲ್ಲಿಯೇ ಸಿಕ್ಕಿ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಮಹಿಳೆಯ ಕುಟಂಬದ ಸದಸ್ಯರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಂದನ್ ಮೇಲಿನ ಆಕ್ರೋಶ ಮೀತಿ ಮೀರಿ ಹೋಗುತ್ತಿದ್ದ ವೇಳೆ ಬಾಳೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.