ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಹಾಗೂ ನಾಗವಂಗಲ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ರೈಲ್ವೆ ಹಳಿ ಮೇಲೆ ತುಂಡಾದ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದ್ದು, ಈ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲ. ರೈಲು ಚಲಿಸುವಾಗ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂಬ ಕುರಿತು ತನಿಖೆ ಮಾಡಲಾಗುತ್ತಿದೆ.
ಅಜ್ಜಂಪುರ ಪೊಲೀಸರು ಹಾಗೂ ಅರಸೀಕೆರೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.