ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಇದೇ ತಿಂಗಳು 28ರಿಂದ ಮಾರ್ಚ್ 1ರವರೆಗೆ ನಡೆಯುವ ಜಿಲ್ಲಾ ಉತ್ಸವದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಇಂದು ಜಿಲ್ಲಾ ಆಟದ ಮೈದಾನದಲ್ಲಿ ಸಾರ್ವಜನಿಕರಿಗಾಗಿ ರಾಕ್ ಕ್ಲೈಂಬಿಂಗ್ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸ್ಪರ್ಧೆಗಳನ್ನು ವೀಕ್ಷಿಸಲು ಸ್ಥಳಕ್ಕೆ ಆಗಮಿಸಿದ್ದರು.
ಈ ವೇಳೆ ಸ್ವತಃ ಜಿಲ್ಲಾಧಿಕಾರಿಗಳೇ ರಾಕ್ ಕ್ಲೈಂಬಿಂಗ್ ಮಾಡುವ ಮೂಲಕ ಸಾಹಸ ಮಾಡಿದ್ರು. ಶರವೇಗದಲ್ಲಿ ಜಿಲ್ಲಾಧಿಕಾರಿಗಳು ರಾಕ್ ಕ್ಲೈಂಬಿಂಗ್ ಮಾಡುತ್ತಿದ್ದರೆ ನೆರೆದಿದ್ದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.