ETV Bharat / state

ಉಪಸಭಾಪತಿ ಎಸ್ ‌ಎಲ್‌ ಧರ್ಮೇಗೌಡರು ರಾಜಕೀಯದಲ್ಲಿ ನಡೆದು ಬಂದ ದಾರಿ.. - Vice President SL Dharma Gowda Political journey

ಒಂದು ಬಾರಿ ತಾಲೂಕು ಪಂಚಾಯತ್‌ ಸದಸ್ಯ, ಎರಡು ಬಾರಿ ಜಿಲ್ಲಾ ಪಂಚಾಯತ್‌ ಸದಸ್ಯರಾಗಿ, ಏಕ ಕಾಲಕ್ಕೆ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ಗೆ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು..

Vice President SL Dharma Gowda Political journey
ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ
author img

By

Published : Dec 29, 2020, 7:31 AM IST

ಚಿಕ್ಕಮಗಳೂರು : ವಿಧಾನಪರಿಷತ್‌ ಉಪಸಭಾಪತಿ ಎಸ್ ‌ಎಲ್‌ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಸೋಮವಾರ ರಾತ್ರಿ ನಡೆದಿದೆ.

ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾದ ಎಸ್ ಎಲ್ ಧರ್ಮೇಗೌಡ ಅವರು, 1955 ಡಿಸೆಂಬರ್​ 16 ರಂದು ಸರಪನಹಳ್ಳಿಯಲ್ಲಿ ಜನಿಸಿದರು. ಚಿಕ್ಕಮಗಳೂರು ತಾಲೂಕು ಬಿಳೇಕಲ್ಲಹಳ್ಳಿ ಮಂಡಲ ಪಂಚಾಯತ್‌ ಸದಸ್ಯರಾಗಿ, ಮಂಡಲ ಪಂಚಾಯತ್‌ ಪ್ರಧಾನರಾಗುವ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು. ಇವರು ಮಮತಾ ಎಂಬುವರ ಜತೆ ವಿವಾಹವಾಗಿದ್ದರು. ಧರ್ಮೇಗೌಡ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮಂಡಲ ಪಂಚಾಯತ್‌ ಸದಸ್ಯರಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಇವರು, ನಂತರ ಚಿಕ್ಕಮಗಳೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ, ಹಾಸನ ಹಾಲು ಒಕ್ಕೂಟದ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಧ್ಯಕ್ಷರಾಗಿ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಜನತಾ ಬಜಾರ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಎಸ್ ಎಲ್ ಧರ್ಮೇಗೌ ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳದ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ, ವಿಮಾ ಸಹಕಾರ ಸಂಘದ ನಿರ್ದೇಶಕ, ರಾಜ್ಯ ಕೈಗಾರಿಕಾ ಬ್ಯಾಂಕ್ ನಿರ್ದೇಶಕ, ನವದೆಹಲಿಯ ಕ್ರಿಬ್ಕೊ ಸಂಸ್ಥೆ ನಿರ್ದೇಶಕ, ನ್ಯಾಫೆಡ್ ಸಂಸ್ಥೆ ನಿರ್ದೇಶಕ, ಇಂಡಿಯನ್ ಪೊಟಾಷ್ ಲಿಮಿಟೆಡ್ ನಿರ್ದೇಶಕ, ಎನ್‍ಸಿಡಿಸಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಒಂದು ಬಾರಿ ತಾಲೂಕು ಪಂಚಾಯತ್‌ ಸದಸ್ಯ, ಎರಡು ಬಾರಿ ಜಿಲ್ಲಾ ಪಂಚಾಯತ್‌ ಸದಸ್ಯರಾಗಿ, ಏಕ ಕಾಲಕ್ಕೆ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ಗೆ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಓದಿ : ಉಪಸಭಾಪತಿ ಎಸ್​ ಎಲ್​ ಧರ್ಮೇಗೌಡ ಆತ್ಮಹತ್ಯೆ, ಕಾರಣ ನಿಗೂಢ

ಬೀರೂರು ವಿಧಾನಸಭಾ ಕ್ಷೇತ್ರದಿಂದ ಜನತಾ ದಳದಿಂದ ಒಂದು ಬಾರಿ ಶಾಸಕರಾಗಿದ್ದರು. ನಂತರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿ ಟಿ ರವಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದ ನಂತರ ಎಸ್ ಎಲ್ ಧರ್ಮೇಗೌಡ ಅವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡಲಾಗಿತ್ತು. ನಂತರ ಉಪ ಸಭಾಪತಿ ಸ್ಥಾನವೂ ದಕ್ಕಿತ್ತು.

ಇತ್ತಿಚೆಗೆ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ಪ್ರಕರಣದಲ್ಲಿ ಸಭಾಪತಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರನ್ನು ಸದಸ್ಯರು ಎಳೆದಾಡಿ ಗಲಾಟೆ ಮಾಡಿದ್ದರು. ಈ ಕುರಿತು ಧರ್ಮೇಗೌಡ ಆಪ್ತರ ಬಳಿ ಪರಿಷತ್​ ಗಲಾಟೆ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ.

ಡೆತ್​ನೋಟ್​​ನಲ್ಲಿ ಪರಿಷತ್​ ಗಲಾಟೆ ಬಗ್ಗೆ ಬರೆದಿದ್ದಾರೆ ಎನ್ನಲಾಗಿದೆ. ಹಾಗೆಯೇ ಡೆತ್‌ನೋಟ್‌ನಲ್ಲಿ ಮಗಳು, ಪತ್ನಿ ಮಮತಾ ಹಾಗೂ ಮಗನಿಗೆ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಸದ್ಯ ಧರ್ಮೇಗೌಡ ಅವರ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ಸಿಗಲಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.