ಚಿಕ್ಕಮಗಳೂರು : 2023 ರ ವಿಧಾನಸಭೆ ಚುನಾವಣೆ ಬಹಿಷ್ಕಾರದ ಕೂಗು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮಸ್ಥರಿಂದ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ರಸ್ತೆ ದುರಸ್ತಿ ಮಾಡದ ಸರ್ಕಾರ ವಿರುದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಗ್ರಾಮದ ರಸ್ತೆ ದುರಸ್ತಿ ಮಾಡದೇ ಇರುವುದರಿಂದ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, 450 ಕ್ಕೂ ಅಧಿಕ ಜನ ಓಡಾಡುವ ರಸ್ತೆ
ಸಂಪೂರ್ಣ ಕುಸಿಯುವ ಹಂತ ತಲುಪಿದೆ. ಹಾಡುಗಾರ ಗ್ರಾಮದ ಜನರು ಮೂಲ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ಜನರ ನಿದ್ದೆಗೆಡಿಸಿದ ಕಾಡಾನೆ ಕೊನೆಗೂ ಸೆರೆ