ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಘಾಟಿಯ ಸೋಮನಕಾಡು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ದಟ್ಟ ಹೊಗೆ ಹರಡಿದ್ದು, ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ.
ನಿರಂತರವಾಗಿ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಹತ್ತಾರು ಜಾತಿಯ ಔಷಧ ಗಿಡಗಳು ಸಹ ಸುಟ್ಟುಹೋಗಿವೆ. ಬಾಳೂರು ಮೀಸಲು ಅರಣ್ಯದ ಸೋಮನಕಾಡು ಪ್ರದೇಶಕ್ಕೂ ಬೆಂಕಿ ವ್ಯಾಪಿಸುತ್ತಿದ್ದು ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಿರಂತರ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ಕೂಲಿಗಾಗಿ ಊರು ಬಿಟ್ಟು ಬಂದಿದ್ದವರ ಮೇಲೆ ಕಾಡಾನೆ ದಾಳಿ: ಕಾಫಿನಾಡಲ್ಲಿ ದಂಪತಿ ಸ್ಥಿತಿ ಗಂಭೀರ