ಚಿಕ್ಕಮಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಹಿಂದೂ ಸಂಘಟನೆಗಳು ಕಿಡಿಕಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ, ಕೊಪ್ಪ ತಾಲೂಕಿನ ಜಯಪುರ ಸಮೀಪದ ಮಕ್ಕಿ ಕೊಪ್ಪದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನೆರೆ ಪೀಡಿತ ಪ್ರದೇಶಗಳ ಭೇಟಿಗೆ ಆಗಮಿಸಿದ್ದರು. ಈ ವೇಳೆ, ಕೇಸರಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದಾರೆ. ಗೋ ಬ್ಯಾಕ್ ಸಿದ್ದು ಅಭಿಯಾನ ಕೂಡ ಆರಂಭಿಸಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯ ಭೂಮಿಗೆ ಬರೋದು ಬೇಡ ಎಂದು ಆಕ್ರೋಶವನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು.
ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನವಾಗಿದೆ. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮಹಾತ್ಮಾ ಗಾಂಧಿಯನ್ನು ಕೊಂದವರು, ನನ್ನನ್ನು ಬಿಡ್ತಾರಾ? ಮಹಾತ್ಮಾ ಗಾಂಧಿಯನ್ನು ಕೊಂದವರನ್ನು ಬಿಜೆಪಿಯವರು ಪೂಜೆ ಮಾಡ್ತಾ ಇದ್ದಾರೆ ಎಂದು ಬಿಜೆಪಿ ಸರ್ಕಾರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬಿಜೆಪಿ ಕೆಳಗಿಳಿಸಿ ಕಾಂಗ್ರೆಸ್ ಆಡಳಿತಕ್ಕೆ ತರಲು ನಿರ್ಧರಿಸಿರುವ ಜನ..ಎಂ ಬಿ ಪಾಟೀಲ್