ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಕೊಪ್ಪ ತಾಲೂಕಿನ ಸೋಮಾಲಪುರದ ನಿವಾಸಿ ವಿಶಾಲಾಕ್ಷಿ (40) ಕಳೆದ 15 ದಿನಗಳ ಹಿಂದೆ ಮನೆಯಲ್ಲಿ ನಡೆಯುತ್ತಿದ್ದ ಕೌಟುಂಬಿಕ ಕೆಲಹಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ. ತಕ್ಷಣ ಅವರನ್ನು ಸ್ಥಳೀಯ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ವಿಶಾಲಾಕ್ಷಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ವತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೊಪ್ಪ ಪೊಲೀಸರು ಈ ಕುರಿತು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.