ETV Bharat / state

ಜಿಲ್ಲೆಯಲ್ಲಿ 104 ಪರೀಕ್ಷಾ ವರದಿಗಳು ನೆಗೆಟಿವ್ : ಡಾ. ಪಾಲಾಕ್ಷ  ಮಾಹಿತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ಅವರು ಕೊರೊನಾ ಕುರಿತು ನಡೆಸಿರುವ ಪರೀಕ್ಷಾ ವರದಿಗಳ ಕುರಿತು ಮಾಹಿತಿ ನೀಡಿದರು.

Palaksha
Palaksha
author img

By

Published : Jun 26, 2020, 5:48 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಂಕಿಗೆ ಸಂಬಂಧಿಸಿದಂತೆ ಒಟ್ಟು 104 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಇನ್ನೂ 02 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದರು.

ಜಿಲ್ಲೆಯಲ್ಲಿ 104 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಎಲ್ಲಾ 104 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದೆ. ಇನ್ನೂ 02 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 2149 ಜನ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ ಎಂದರು.

ಒಟ್ಟು ಸೋಂಕಿತರ ಸಂಖ್ಯೆ 47 ಇದ್ದು, 43 ಜನ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ 03 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಈವರೆಗೆ 4683 ಜನರ ಮಾದರಿ ಸಂಗ್ರಹಿಸಲಾಗಿದ್ದು, 4502 ಜನರ ವರದಿ ನೆಗೆಟಿವ್ ಬಂದಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.