ಚಿತ್ರದುರ್ಗ: ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಗೆ ಮಾರಣಾಂತಿಕ ಕೊರೊನಾ ವೈರಸ್ ಕಾಲಿಟ್ಟ ಪರಿಣಾಮ ಚಿತ್ರದುರ್ಗದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.
ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿರುವುದಾಗಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಅಂತ್ಯಕ್ರಿಯೆ, ವೈದ್ಯಕೀಯ ಪರೀಕ್ಷೆ ಹೊರತುಪಡಿಸಿ ಜಾತ್ರೆ, ಉರುಸ್, ಸಂತೆ, ಶಾಪಿಂಗ್ ಮಾಲ್ಗಳನ್ನು ತೆರೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಯಮ ಮೀರಿ ಕಾರ್ಯಕ್ರಮಗಳನ್ನು ನೆರವೇರಿಸಲು ಮುಂದಾದಲ್ಲಿ ಕಾನೂನು ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.