ಚಿತ್ರದುರ್ಗ: ಕೊರೊನಾ ವೈರಸ್ ಭೀತಿಯ ಹಿನ್ನೆಲೆ ಇಂದು ಸಂಜೆ 6 ಗಂಟೆಯಿಂದ ಜ. 2 ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯತ್ ಫಲಿತಾಂಶ ಘೋಷಣೆ ಹಾಗೂ ರಾಜ್ಯದಲ್ಲಿ ಕೊರೊನಾ ಹರಡುವ ಹಿನ್ನಲೆ, ಚಿತ್ರದುರ್ಗ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜನವರಿ 2 ರ ಬೆಳಗ್ಗೆ6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಕವಿತಾ ಆದೇಶ ಹೊರಡಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ, ಹೊಸ ವರ್ಷದ ಪಾರ್ಟಿ, ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಜನರು ಗುಂಪು ಗುಂಪಾಗಿ ಸೇರಿ ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.