ಚಿತ್ರದುರ್ಗ: 27 ವರ್ಷದ ವೈದ್ಯ ಹಾಗೂ 8 ವರ್ಷದ ಬಾಲಕನಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಿರಿಯೂರು ಪಟ್ಟಣದ ವೇದಾವತಿ ಬಡಾವಣೆ ಮೂಲದ ವೈದ್ಯನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ್ದ ವೈದ್ಯ ಇವರಾಗಿದ್ದು, ಸೋಂಕು ದೃಢವಾದ ಬೆನ್ನಲ್ಲೇ ಇವರನ್ನು ಚಿತ್ರದುರ್ಗದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.
8 ವರ್ಷದ ಬಾಲಕನಲ್ಲೂ ಕೂಡ ಸೋಂಕು ದೃಢಪಟ್ಟಿದ್ದು, ಅಂತರ್ ಜಿಲ್ಲಾ ಪ್ರಯಾಣದಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.