ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕೋಟೆನಾಡಿನಲ್ಲಿ ಒಟ್ಟು 24 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 24 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ 24 ಜನರ ಪೈಕಿ 23 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದರು.
ಓರ್ವ ಅಭ್ಯರ್ಥಿಯ ನಾಮಪತ್ರ ಕುರಿತು ವಿಚಾರಣೆಗೆ ಒಳಪಡಿಸಲಾಗಿದೆ. ಇದಕ್ಕೆ ಏನು ಕಾರಣ ಅನ್ನೋದು ಜಿಲ್ಲಾ ಚುನಾವಣಾಧಿಕಾರಿಯವರ ಸಭೆ ಬಳಿಕ ತಿಳಿದು ಬರಲಿದೆ.