ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು 24 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 837ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ 8, ಹೊಳಲ್ಕೆರೆಯಲ್ಲಿ 2, ಹಿರಿಯೂರು ಹಾಗೂ ಚಳ್ಳಕೆರೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.
ಹೊಸದುರ್ಗ ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ ಇಬ್ಬರು ಸೇರಿ ಒಟ್ಟು 24 ಪ್ರಕರಣಗಳು ದಾಖಲಾವೆ. 948 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೂ ಸೋಂಕಿನಿಂದ ಜಿಲ್ಲೆಯಲ್ಲಿ 16 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 472 ಜನರು ಗುಣಮುಖರಾಗಿ, ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 349 ಸಕ್ರಿಯ ಪ್ರಕರಣಗಳು ಇವೆ.