ಚಿತ್ರದುರ್ಗ: ಬೆಂಕಿ ಹಚ್ಚಿಕೊಂಡು ಮಗಳ ಸಹಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗಾರೇಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಅರುಣ್ (40), ಲತಾ (35), ಅವರ ಪುತ್ರಿ ಅಮೃತಾ (13) ಆತ್ಮಹತ್ಯೆಗೆ ಶರಣಾದವರು. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳು ಛಿದ್ರವಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.