ಚಿತ್ರದುರ್ಗ : ಜಿಲ್ಲೆಯಲ್ಲಿ ಇಂದು 353 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 6,375ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲೂಕಿನಲ್ಲಿ- 180, ಚಳ್ಳಕೆರೆ- 69, ಹಿರಿಯೂರು- 04, ಹೊಸದುರ್ಗ- 40, ಮೊಳಕಾಲ್ಮುರು- 09 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ- 51 ಸೇರಿದಂತೆ ಒಟ್ಟು 353 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 246 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 376 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.
ವರದಿಯಲ್ಲಿ 353 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,375 ಕ್ಕೆ ಏರಿಕೆಯಾಗಿದೆ. ಇದುವರೆಗೆ 35 ಜನ ಕೋವಿಡ್ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 5,076 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,264 ಸಕ್ರಿಯ ಪ್ರಕರಣಗಳು ಇವೆ.