ಚಿತ್ರದುರ್ಗ: ಜಿಲ್ಲೆಯಲ್ಲಿ ಈವರೆಗೆ 49 ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರು ಮತ್ತು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ರೋಗಿಗಳಲ್ಲಿ ಹೆಚ್ಚಾಗಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಚಿತ್ರದುರ್ಗ ತಾಲೂಕಿನ 28 ಜನರಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಂಡರೆ, ಚಳ್ಳಕೆರೆಯ 12 ಮಂದಿಯಲ್ಲಿ ಫಂಗಸ್ ಕಾಣಿಸಿಕೊಂಡಿದೆ. ಬ್ಲ್ಯಾಕ್ ಫಂಗಸ್ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕಪ್ಪು ಶಿಲೀಂಧ್ರದಿಂದ ಬಳಲುತ್ತಿರುವ ರೋಗಿಗಳಿಗೆ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಹಾಗು ಡಾ.ಪ್ರಹ್ಲಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಈ ಬಗ್ಗೆ ನಿಗಾ ವಹಿಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್‌ಗೆ ಲಸಿಕೆ ವಿತರಿಸಲು ಅನುಮತಿ ನೀಡಬೇಕು: ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಮನವಿ