ಚಿತ್ರದುರ್ಗ: ಜಿಲ್ಲೆಯಲ್ಲಿಂದು 53 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 577ಕ್ಕೆ ಏರಿಕೆಯಾಗಿದೆ. ಇಬ್ಬರು ಸೋಂಕಿನ ಜೊತೆ ಹೋರಾಡಿ ಪ್ರಾಣ ಕಳೆದುಕೊಂಡಿದ್ದಾರೆ.
405 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ 53 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕೊನೆಯುಸಿರೆಳೆದಿದ್ದು ಇದುವರೆಗೆ 14 ಜನ ಮೃತಪಟ್ಟಿದ್ದಾರೆ.
577 ಸೋಂಕಿತರ ಪೈಕಿ ಈಗಾಗಲೇ 183 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 382 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.