ಚಿತ್ರದುರ್ಗ: ಜಿಲ್ಲೆಯಲ್ಲಿಂದು 64 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,021ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲೂಕಿನಲ್ಲಿ 9, ಹೊಳಲ್ಕೆರೆಯಲ್ಲಿ 3, ಹಿರಿಯೂರಿನಲ್ಲಿ 19, ಚಳ್ಳಕೆರೆಯಲ್ಲಿ 15, ಹೊಸದುರ್ಗದಲ್ಲಿ 8 ಹಾಗು ಮೊಳಕಾಲ್ಮೂರು ತಾಲೂಕಿನಲ್ಲಿ 10 ಸೋಂಕು ಪ್ರಕರಣಗಳು ಸೇರಿದಂತೆ ಒಟ್ಟು 64 ಕೊರೊನಾ ಪ್ರಕರಣ ವರದಿಯಾಗಿದೆ.
ಜಿಲ್ಲೆಯ ಹಲವೆಡೆ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 25 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 527 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 16 ಜನರು ಸಾವನ್ನಪ್ಪಿದ್ದಾರೆ. ಸದ್ಯ 478 ಸಕ್ರಿಯ ಪ್ರಕರಣಗಳು ಇವೆ.