ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು 67 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1,712 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲೂಕಿನಲ್ಲಿ 14, ಹಿರಿಯೂರು-7, ಚಳ್ಳಕೆರೆ-4, ಹೊಸದುರ್ಗ-3, ಮೊಳಕಾಲ್ಮೂರು 28 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 11 ಸೇರಿದಂತೆ ಒಟ್ಟು 67 ಕೋವಿಡ್ ಪ್ರಕರಣಗಳು ಇಂದು ದೃಢಪಟ್ಟಿವೆ. ಜಿಲ್ಲೆಯಲ್ಲಿ ಇದುವರೆಗೆ 19 ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ ಇಂದು 21 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1167 ಜನರು ಕೊರೊನಾದಿಂದ ಮುಕ್ತರಾದಂತಾಗಿದೆ. ಜಿಲ್ಲೆಯಲ್ಲಿ ಸದ್ಯ 526 ಸಕ್ರಿಯ ಪ್ರಕರಣಗಳಿವೆ.