ಚಿತ್ರದುರ್ಗ : ಚಿರತೆ ದಾಳಿ ನಡೆಸಿದ ಪರಿಣಾಮ 7 ಕುರಿಗಳು ಸಾವನ್ನಪ್ಪಿದ ಘಟನೆ ಹೊಸದುರ್ಗ ತಾಲೂಕಿನ ಹಾರೋಗೊಂಡನಹಳ್ಳಿಯಲ್ಲಿ ನಡೆದಿದೆ. ಮಂಜುನಾಥ ಎಂಬುವರಿಗೆ ಸೇರಿದ ಕುರಿಗಳು ಕೊಟ್ಟಿಗೆಯಲ್ಲಿದ್ದ ವೇಳೆ ಬೆಳಗಿನ ಜಾವ ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದೆ.
ಇದರಿಂದ 7 ಕುರಿಗಳು ಸಾವನ್ನಪ್ಪಿವೆ. ಹಾರೋಗೊಂಡನಹಳ್ಳಿ ಗ್ರಾಮದಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇತ್ತ ಗ್ರಾಮದಲ್ಲಿ ಚಿರತೆ ಹಾವಳಿಯಿಂದ ಮಹಿಳೆಯರು, ಮಕ್ಕಳು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.