ಚಿತ್ರದುರ್ಗ: ಜಿಲ್ಲೆಯಲ್ಲಿಂದು 90 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,513ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲೂಕು- 21, ಹಿರಿಯೂರು-04, ಮೊಳಕಾಲ್ಮುರು-14, ಹೊಳಲ್ಕೆರೆ- 12, ಹೊಸದುರ್ಗ-10, ಚಳ್ಳಕೆರೆ-29 ಸೇರಿದಂತೆ ಒಟ್ಟು 90 ಕೊರೊನಾ ಪ್ರಕರಣಗಳು ಇಂದು ವರದಿಯಾಗಿದೆ.
ಜಿಲ್ಲೆಯ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 34 ಜನರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ.
ಈವರೆಗೆ 34 ಜನರು ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಪೈಕಿ ಈಗಾಗಲೇ 1,693 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ ಜಿಲ್ಲೆಯಲ್ಲಿ 785 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.