ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹೊಸದಾಗಿ 94 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,585ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 342 ಜನರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಂಕಿತರ ಪೈಕಿ ಈಗಾಗಲೆ 5,353 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,232 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.