ETV Bharat / state

ಚಿತ್ರದುರ್ಗದಲ್ಲಿ 94 ಜನರಿಗೆ ಕೊರೊನಾ ಸೋಂಕು ದೃಢ: ಸೋಂಕಿತರ ಸಂಖ್ಯೆ 4,159ಕ್ಕೆ ಏರಿಕೆ... - Chitradurga corona News

ಚಿತ್ರದುರ್ಗ ಜಿಲ್ಲೆಯಲ್ಲಿ 94 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,159ಕ್ಕೆ ಏರಿಕೆಯಾದಂತಾಗಿದೆ.

Chitradurga
ಚಿತ್ರದುರ್ಗ ಕೋವಿಡ್​ ಆಸ್ಪತ್ರೆ
author img

By

Published : Sep 9, 2020, 10:28 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ 94 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,159ಕ್ಕೆ ಏರಿಕೆಯಾದಂತಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 35, ಚಳ್ಳಕೆರೆ 11, ಹಿರಿಯೂರು 16, ಹೊಸದುರ್ಗ 18 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 14 ಸೇರಿದಂತೆ ಒಟ್ಟು 94 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೊರೊನಾಗೆ ಆಸ್ಪತ್ರೆ ಮತ್ತು ವಿವಿಧ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 271 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು 769 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 94 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4,159ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,784 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,340 ಸಕ್ರಿಯ ಪ್ರಕರಣಗಳು ಇವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.