ಚಿತ್ರದುರ್ಗ: ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಹೊಸದುರ್ಗ ತಾಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಚೆಕ್ ಡ್ಯಾಂನಲ್ಲಿ ಈ ಅವಘಡ ನಡೆದಿದ್ದು, ಕಾರೇಹಳ್ಳಿ ನಿವಾಸಿ ಪ್ರವೀಣ್ (21) ಮೃತ ಯುವಕ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕನ ಸಾವಿನಿಂದಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ.