ಚಿತ್ರದುರ್ಗ: ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನಿಂದ ಯುವಕನೋರ್ವ ಇಳಿಯಲು ಪ್ರಯತ್ನಿಸಿ ಅದೇ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಮೃತನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಾಳೇನಹಳ್ಳಿ ನಿವಾಸಿ ಪವನ್ (19) ಎಂದು ಗುರುತಿಸಲಾಗಿದೆ. ಯುವಕನ ರುಂಡ-ಮುಂಡ ಬೇರ್ಪಟ್ಟಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.