ಚಿತ್ರದುರ್ಗ : ವೇಗವಾಗಿ ಬಂದ ಕಾರೊಂದು ಬೈಕ್ಗೆ ಹಿಂಬದಿಯಿಂದ ಗುದ್ದಿದ್ದ ಪರಿಣಾಮ, ಸವಾರ ರಸ್ತೆಗೆಸೆಯಲ್ಪಟ್ಟ ಘಟನೆಯೊಂದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು ಬೈಕ್ ಸವಾರನನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೊಳಗಾದ ಬೈಕ್ ಸವಾರನ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಅಪಘಾತದ ಭೀಕರ ದೃಶ್ಯ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.