ಚಿತ್ರದುರ್ಗ: ಅಪಘಾತಕ್ಕೀಡಾಗಿ ಗಾಯಗೊಂಡ ನರಿಯನ್ನು ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯಲ್ಲಿ ದಾವಣಗೆರೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ ಹಾಗೂ ಶಿವಮೊಗ್ಗದ ಬಸವ ಮರುಳಸಿದ್ಧಶ್ರೀಗಳಿಬ್ಬರೂ ರಕ್ಷಿಸಿದ ಘಟನೆ ನಡೆದಿದೆ.
ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ನರಿಗೆ ನೀರು ಕುಡಿಸಿ ಆರೈಕೆ ಮಾಡಿ ಚಿಕಿತ್ಸೆ ಕೂಡ ನೀಡಲಾಗಿದೆ. ದಾವಣಗೆರೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ ಹಾಗೂ ಶಿವಮೊಗ್ಗದ ಬಸವ ಮರುಳಸಿದ್ಧ ಶ್ರೀಗಳ ಜೀವಪರ ಕಾಳಜಿಗೆ ಸಾಮಾಜಿಕ ಜಾಲತಾಣದಲ್ಲಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.