ಚಿತ್ರದುರ್ಗ: ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಶ್ರೀನಿವಾಸ ಎಂಬ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ವಿವಾಹ ಪ್ರೋತ್ಸಾಹ ಧನ ನೀಡಲು ಶಿವಪ್ಪ ಎಂಬುವವರಿಂದ 10 ಸಾವಿರ ಹಣ ಪಡೆಯುತ್ತಿದ್ದರು ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಶಿವಪ್ಪ ಎಂಬುವರು ಅಧಿಕಾರಿ ವಿರುದ್ಧ ನೀಡಿದ ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಂಚ ಸ್ವೀಕಾರ ಆರೋಪದ ಮೇಲೆ ಅಧಿಕಾರಿಯನ್ನ ವಶಕ್ಕೆ ಪಡೆದಿದ್ದಾರೆ.