ಚಿತ್ರದುರ್ಗ: ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ ಓರ್ವ ಕೊನೆಯುಸಿರೆಳೆದಿರುವ ಘಟನೆ ಶಿವಗಂಗಾ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಂಭು(60) ಮೃತ ವ್ಯಕ್ತಿಯಾಗಿದ್ದು, ಅದೇ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.