ETV Bharat / state

ಚಿತ್ರದುರ್ಗ: ಗುರಾಯಿಸಿ ನೋಡಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ - Accused escapes after being stabbed with a knife to man in Chitradurga

ಕ್ಷುಲ್ಲಕ ಕಾರಣಕ್ಕೆ ಜಗಳ- ಗುರಾಯಿಸಿ ನೋಡಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ - ಹಿರಿಯೂರು ತಾಲೂಕಿನ ಆಲೂರು ಗ್ರಾಮದಲ್ಲಿ ಪ್ರಕರಣ

ಆರೋಪಿ ನೂತನ್
ಆರೋಪಿ ನೂತನ್
author img

By

Published : Jul 3, 2022, 3:37 PM IST

ಚಿತ್ರದುರ್ಗ: ಗುರಾಯಿಸಿ ನೋಡಿದ್ದನ್ನು ಪ್ರಶ್ನಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದಿರುವ ಪ್ರಕರಣ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಕೃಷ್ಣ ರಾಜಪುರ ರಸ್ತೆಯಲ್ಲಿ ನಡೆದಿದೆ. ಸಮಿವುಲ್ಲಾ (35) ಚಾಕು ಇರಿತಕ್ಕೊಳಗಾದ ವ್ಯಕ್ತಿ.

ನೂತನ್ ಎಂಬ ಯುವಕ ಸಮಿವುಲ್ಲಾ ಎಂಬಾತನನ್ನು ಗುರಾಯಿಸಿದ್ದಾನೆ. ಈ ವೇಳೆ ಇದನ್ನು ಪ್ರಶ್ನಿಸಿದ್ದಕ್ಕೆ ಸಮಿವುಲ್ಲಾಗೆ ಚಾಕು ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಚಾಕು ಇರಿತಕ್ಕೊಳಗಾದ ಸಮಿವುಲ್ಲಾ ಸ್ಥಿತಿ ಗಂಭೀರವಾಗಿದ್ದು, ಆತನನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಆರೋಪಿ ನೂತನ್​ ತಲೆಮರೆಸಿಕೊಂಡಿದ್ದಾನೆ. ವಿಶೇಷ ತಂಡಗಳನ್ನ ರಚಿಸಿ ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮರಳುಗಾರಿಕೆ ದೋಣಿ ಮಗುಚಿ ಉತ್ತರ ಪ್ರದೇಶದ ಕಾರ್ಮಿಕ ನಾಪತ್ತೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.