ಚಿತ್ರದುರ್ಗ: ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ 1,240 ಜನರನ್ನು ಬಂಧಿಸಲಾಗಿದೆ. 730ಕ್ಕೂ ಹೆಚ್ಚು ವಾಹನ ಜಪ್ತಿ ಸೇರಿದಂತೆ 463 ಪ್ರಕರಣ ದಾಖಲು ಮಾಡಲಾಗಿದೆ. ಲಾಕ್ಡೌನ್ ವೇಳೆ ಜೂಜಾಟದಲ್ಲಿ ತೊಡಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಮಾರ್ಚ್ 15ರಿಂದ ಈವರೆಗೆ ಜೂಜಾಟದಲ್ಲಿ ತೊಡಗಿದ್ದ 861 ಜನರನ್ನು ಬಂಧಿಸಿ 155 ಪ್ರಕರಣ ದಾಖಸಲಾಗಿದೆ. ಪಣಕ್ಕಿಟ್ಟಿದ್ದ 12 ಲಕ್ಷದ 76 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ರಂಜಾನ್ ಮಾಸ ಆಗಮಿಸಿದ್ದರಿಂದ ಮುಸ್ಲಿಂ ಸಮುದಾಯದವರು ಮನೆಯಲ್ಲೇ ಪ್ರಾರ್ಥನೆ ಮಾಡಲು ಸೂಚಿಸಲಾಗಿದ್ದು, ಅಗತ್ಯ ವಸ್ತುಗಳ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿಗಳ ಮಾಲೀಕರು ನಿಯಮ ಮೀರಿದರೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಜನರು ಅದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.