ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮವನ್ನು ಬಿಎಸ್ವೈ ಸರ್ಕಾರ ತಡೆ ಹಿಡಿದಂತೆ ಕಾಣಿಸಿದ ಬೆನ್ನಲ್ಲೇ ಇದೀಗ ಎಲ್ಲಾ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವಂತೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಬೀದಿಗಿಳಿದು ಪ್ರತಿಭಟಿಸಿದೆ.
ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳ ರಾಜ್ಯ ಸರ್ಕಾರ ವಿರುದ್ಧ ಲ್ಯಾಪ್ಟಾಪ್ಗಾಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಸಿಎಂ ಬಿಎಸ್ವೈ ವಿರುದ್ಧ ಧಿಕ್ಕಾರ ಹಾಕುವ ಮೂಲಕ ಕೂಡಲೇ ಎಲ್ಲಾ ಪದವಿ ವಿಧ್ಯಾರ್ಥಿಗಳಿಗೂ ಲ್ಯಾಪ್ ಟ್ಯಾಪ್ ನೀಡಿ ಎಂದು ಒತ್ತಾಯಿಸಿದ್ದಾರೆ.