ETV Bharat / state

ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ - ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಡಾ. ನಂದಿನಿ

ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನರೇಗಾ ಯೋಜನೆ 2020-21 ನೇ ಸಾಲಿನ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

corruption in Narega Plan
ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಡಾ. ನಂದಿನಿ
author img

By

Published : Dec 14, 2020, 7:16 PM IST

ಚಿತ್ರದುರ್ಗ: ಮನ್ನೇಕೋಟೆ ಗ್ರಾಮ ಪಂಚಾಯಿತಿ ನರೇಗಾ ಕಾಮಗಾರಿಗಳಲ್ಲಿ ಅಕ್ರಮ ನಡೆಸಿದೆ ಎಂಬ ಗ್ರಾಮಸ್ಥರ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ನಂದಿನಿ ದೇವಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಡಾ. ನಂದಿನಿ

ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ನರೇಗಾ ಯೋಜನೆ 2020-21 ನೇ ಸಾಲಿನ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಈ ಕುರಿತು ಈಟಿವಿ ಭಾರತ ವರದಿ ಬಿತ್ತರಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪಂಚಾಯತ್ ಸಿಇಒ ಡಾಕ್ಟರ್ ನಂದಿನಿ ದೇವಿ, ಆರೋಪವನ್ನ ಗಂಭೀರವಾಗಿ ಪರಿಗಣಿಸಲಾಗುವುದು. ಅಕ್ರಮ ನಡೆದಿದೆ ಎಂದು ಸಾಬೀತಾದರೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.

ಓದಿ: ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ : ಗ್ರಾಪಂ​ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ

ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರು ಮಾಡುತ್ತಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ತಕ್ಷಣವೇ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.