ಚಿತ್ರದುರ್ಗ: ಕೊರೊನಾ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ, ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು.
ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರು ಭಾಗಿಯಾಗಿ ತಿಂಗಳ ವೇತನ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ಕೊರೊನಾ ವಿರುದ್ಧದ ಹೋರಾಟ ಮಾಡಿದ ನಮಗೆ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಸಾಕಷ್ಟು ಆಶಾ ಕಾರ್ಯಕರ್ತೆಯರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಗೌರವ ಧನವನ್ನು 12,000ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ಮನವಿ ಮಾಡಿದರು.