ಚಿತ್ರದುರ್ಗ: ASI ಓರ್ವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ದಂಡಿನ ಕುರುಬರ ಹಟ್ಟಿ ಬಳಿ ನಡೆದಿದೆ. ಗುರುಮೂರ್ತಿ (50) ಆತ್ಮಹತ್ಯೆ ಮಾಡಿಕೊಂಡಿರುವ ಎಎಸ್ಐ.

ಮೃತ ಗುರುಮೂರ್ತಿ ನಾಹಕನಹಟ್ಟಿ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಹಿಂದೂ ಗಣಪತಿ ನಿಮಜ್ಜನ ಮೆರವಣಿಗೆ ಕರ್ತವ್ಯಕ್ಕೆ ಬಂದಿದ್ದ ಗುರುಮೂರ್ತಿ, ಮೆರವಣಿಗೆ ಮುಗಿಸಿ ರಾತ್ರಿ ಊರಿಗೆ ವಾಪಸ್ ಆಗುವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.
ಇದನ್ನೂ ಓದಿ: ಉಳುಮೆ ವೇಳೆ ಹೆದರಿದ ಜೋಡೆತ್ತು.. ಬಾವಿಗೆ ಬಿದ್ದು ರಾಸುಗಳು ದಾರುಣ ಸಾವು
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.