ಚಿತ್ರದುರ್ಗ: ಫಸಲಿಗೆ ಬಂದಿದ್ದ ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚೀಕ್ಕೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ಮಂಜಪ್ಪ ಎಂಬುವವರು 2 ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದಿದ್ದ ಬಾಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ. ಹೀಗಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.
ಕೊರೊನಾ ಮಧ್ಯೆಯೂ ಲಾಭದ ನಿರೀಕ್ಷೆಯಲ್ಲಿದ್ದ ರೈತನಿಗೆ ಆಕಸ್ಮಿಕ ಬೆಂಕಿ ಸಂಕಷ್ಟ ತಂದಿದೆ. ಕೋಳಿ ಗೊಬ್ಬರ, ಡ್ರಿಪ್, ಔಷಧಿಗಾಗಿ ಮೂರ್ನಾಲ್ಕು ಲಕ್ಷ ರೂ. ಖರ್ಚು ಮಾಡಿ ಬೆಳೆ ಬೆಳೆಯಾಲಾಗಿತ್ತು. ಈಗ ನೋಡಿದರೆ ಬೆಳೆ ಸುಟ್ಟು ಹೋಗಿದೆ ಎಂದು ರೈತ ಅಳಲು ತೋಡಿಕೊಂಡಿದ್ದಾನೆ.