ಚಿತ್ರದುರ್ಗ: ಈಚೆಗೆ ಬೆಂಗಳೂರಿನ ಕೆ.ಜಿ ಹಳ್ಳಿ ಹಾಗೂ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತ ಹಾಗೂ ಸರ್ಕಾರಕ್ಕೆ ಮಸಿ ಬಳಿಯುವ ದುರುದ್ದೇಶದಿಂದ ಇಂತಹ ಕೃತ್ಯ ಎಸಗಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದರು.
ಜಿಲ್ಲೆಯ ಕಸ್ತೂರಿ ರಂಗಪ್ಪನಾಯಕ ಹಳ್ಳಿಯಲ್ಲಿ ಮಾತನಾಡಿದ ಅವರು, ಈ ಗಲಭೆ ಹಿಂದೆ ಯಾವದೇ ಪ್ರಭಾವಶಾಲಿಗಳ ಅಥವಾ ಜಾತಿ, ಧರ್ಮದವರು ಇರಲಿ. ಅವರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಪೊಲೀಸರ ಗುಂಡೇಟಿಗೆ ಬಲಯಾದವರು ಅಮಾಯಕರಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅನ್ಯಾಯವಾಗಿ ಹಿಂದೂ ಸಂಘಟನೆಗಳ ಮೇಲೆ ಪ್ರಕರಣ ದಾಖಲಾಗಿರುತ್ತದೆಯೋ ಅಂತಹ ಕಡೆಗಳಲ್ಲಿ ಪ್ರಕರಣ ಹಿಂಪಡೆಯಬಹುದು ಎಂದು ಉತ್ತರಿಸಿದರು.
ಈಚೆಗೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಅವರು ಭಜರಂಗದಳ ಹಾಗೂ ವಿಹೆಚ್ಪಿ ಪರ ಸಂಘಟನೆಗಳ ಕಾರ್ಯಕರ್ತರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುತ್ತೇವೆ ಎಂದು ಹೇಳಿದ ವಿಡಿಯೋ ವೈರಲ್ ಆಗಿತ್ತು.
ಪಿಎಫ್ಐ, ಎಸ್ಡಿಪಿಐ ಸಂಘಟನೆಗಳ ಮೇಲೆ ನಿಷೇಧ ಹೇರಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಸತ್ತವರೆಲ್ಲ ಅಮಾಯಕರು ಎಂಬ ಶಾಸಕ ಜಮೀರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಮಾಯಕರಾಗಿದ್ದರೇ ಬೆಂಕಿ ಹಚ್ಚುವ ಸ್ಥಳದಲ್ಲಿ ಯಾಕೆ ಜಮಾಯಿಸಿದ್ದರು. ಗಲಭೆಯಲ್ಲಿ ಹೇಗೆ ಕಾಣಿಸಿಕೊಂಡರು ಎಂದು ಪ್ರಶ್ನಿಸಿದರು.