ETV Bharat / state

ಸಾಮಾಜಿಕ ಅಂತರದ ಬಗ್ಗೆ ಅರಿವೆ ಇಲ್ಲದೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ಬಿ ಸಿ ಪಾಟೀಲ್​ - ಚಿತ್ರದುರ್ಗಕ್ಕೆ ಭೇಟಿ ನೀಡಿದ ಬಿ.ಸಿ.ಪಾಟೀಲ್​

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅವರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡು ಬಂತು..

BC Patil
ಸಾಮಾಜಿಕ ಅಂತರ ಮರೆತ ಸಚಿವ ಬಿ.ಸಿ.ಪಾಟೀಲ್​
author img

By

Published : Jul 1, 2020, 7:19 PM IST

ಚಿತ್ರದುರ್ಗ : ಜನಸಾಮಾನ್ಯರಿಗೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಗ್ಗೆ ಪಾಠ ಮಾಡುವ ಜನಪ್ರತಿನಿಧಿಗಳು ತಾವೇ ಸಾಮಾಜಿಕ ಅಂತರ ಕಾಪಾಡದೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಘಟನೆಗಳು ಮರುಕಳಿಸುತ್ತಿವೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರಕ್ಕೆ ಇಂದು ಭೇಟಿ ನೀಡಿದ್ದ ಸಚಿವ ಬಿ ಸಿ ಪಾಟೀಲ್, ಸಾಮಾಜಿಕ ಅಂತರ ಕಾಪಾಡದೆ, ವಿವಿಧ ಬೆಳೆಗಳ ಪ್ರದರ್ಶನದ ಸ್ಟಾಲ್‌ಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಸಾಮಾಜಿಕ ಅಂತರ ಕಾಪಾಡದೆ ಸರ್ಕಾರ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಾರೆ.

ಸಾಮಾಜಿಕ ಅಂತರ ಮರೆತ ಸಚಿವ ಬಿ ಸಿ ಪಾಟೀಲ್​..

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅವರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡು ಬಂತು. ಹಿರಿಯೂರಿನಲ್ಲಿ ಕೊರೊನಾ ಹಾವಳಿ ಹೆಚ್ಚಿದ್ದರೂ ಸಹ ಸಾಮಾಜಿಕ ಅಂತರ ಮರೆತಿರುವ ಜನಪ್ರತಿನಿಧಿಗಳು ಕಾನೂನು ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.