ಚಿತ್ರದುರ್ಗ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಮಲ್ಲೆಣು ಗ್ರಾಮದ ಬಳಿ ನಡೆದಿದೆ.
ಶ್ರವಣಗೆರೆ ಗ್ರಾಮದ ನಿವಾಸಿ ಮಂಜುನಾಥ್ (28) ಮಸ್ಕಲ್ ಗ್ರಾಮದ ರವಿಚಂದ್ರ(29) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದರ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.