ಚಿತ್ರದುರ್ಗ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಿರಿಗೆರೆ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಳಸಪ್ಪ ಎಂದು ಗುರುತಿಸಲಾಗಿದೆ. ಸಿರಿಗೆರೆ, ಬಸವಪಟ್ಟಣ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಸಿರಿಗೆರೆ ಉಪಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.