ಚಿತ್ರದುರ್ಗ : ಜನ ಸೇವಕ ಸಮಾವೇಶ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಲು ಜನಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ಓದಿ: ಬಿಜೆಪಿಯಿಂದ ಜಿಪಂ, ತಾಪಂ ಟಾರ್ಗೆಟ್.. ಜನಸೇವಕ ಸಮಾವೇಶ ಆಯೋಜಿಸಲು ನಿರ್ಧಾರ..
ಕಾರ್ಯಕ್ರಮದಲ್ಲಿ ಸಚಿವ ಬಸವರಾಜ್ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಭಾಗಿಯಾಗಿದ್ದರು.