ಚಿತ್ರದುರ್ಗ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸದಾಗಿ 11 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.
ಕೋಟೆನಾಡಿನಲ್ಲಿ ಈವರೆಗೆ ಒಟ್ಟು 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ 18 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಜಿಲ್ಲಾಸ್ಪತ್ರೆ, ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬೇಕಾದ ಆಂಪೋಟೆರಿಸಿನ್ ಬಿ ಔಷಧದ ಕೊರತೆ ಉಂಟಾಗಿದ್ದು, ರೋಗಿಗಳು ಆತಂಕದಲ್ಲಿದ್ದಾರೆ.
ಓದಿ: ಭಾರತದ ಮೊಟ್ಟ ಮೊದಲ 'ಚರ್ಮದ ಬ್ಲ್ಯಾಕ್ ಫಂಗಸ್' ಚಿತ್ರದುರ್ಗದಲ್ಲಿ ಪತ್ತೆ..!